ರಾಜ್ಯಾದ್ಯಂತ 18 ರಿಂದ 44 ವರ್ಷ ವಯೋಮಾನದವರ ಕೋವಿಡ್ ಲಸಿಕಾಕರಣವನ್ನು ದಿನಾಂಕ 14.05.2021 ರಿಂದ ಮುಂದಿನ ಆದೇಶದವರೆಗೆ ರಾಜ್ಯ ಸರ್ಕಾರದ ಎಲ್ಲಾ ಸರ್ಕಾರಿ ಕೋವಿಡ್ ಲಸಿಕಾ ಕೇಂದ್ರಗಳಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
medicine for coronavirus
ಸಾರ್ವಜನಿಕರ ಮಾಹಿತಿಗಾಗಿ :
ದಿನಾಂಕ : 07.05.2021 ರಿಂದ ರಾಜ್ಯ ಸರ್ಕಾರವು ಭಾರತ ಸರ್ಕಾರದಿಂದ 40+ ವಯೋಮಾನದವರ ಲಸಿಕಾಕರಣಕ್ಕಾಗಿ
ಹಂಚಿಕೆಯಾದ ಲಸಿಕೆಗಳನ್ನು 2 ನೇಯ ಡೋಸ್ ಪಡೆಯಲು ಬಾಕಿ ಇರುವ ಫಲಾನುಭವಿಗಳ ಲಸಿಕಾಕರಣಕ್ಕೆ ಮಾತ್ರ ಬಳಸಲು ನಿರ್ಧರಿಸಿರುತ್ತದೆ .
ಇಂದು ರಾಜ್ಯ ಸರ್ಕಾರವು ನೇರವಾಗಿ 18 ರಿಂದ 44 ವರ್ಷದ ವಯೋಮಾನದ ಫಲಾನುಭವಿಗಳ ಲಸಿಕಾಕರಣಕ್ಕೆ ಖರೀದಿಸಿದ
ಪೂರ್ಣ ದಾಸ್ತಾನನ್ನು ಸಹ 2 ನೆಯ ಡೋಸ್ ಪಡೆಯಲು ಬಾಕಿ ಇರುವ ಫಲಾನುಭವಿಗಳ ಬಳಕೆಗೆ ವಿನಿಯೋಗಿಸಲು
ನಿರ್ಧರಿಸಿದೆ ಆದ್ದರಿಂದ ರಾಜ್ಯದಲ್ಲಿ ಇರುವ ಎಲ್ಲಾ ಲಸಿಕೆಗಳ ( ಕೇಂದ್ರ ಸರ್ಕಾರದಿಂದ ಒದಗಿಸಲಾದ ಹಾಗೂ
ರಾಜ್ಯ ಸರ್ಕಾರದಿಂದ ನೇರವಾಗಿ ಖರೀದಿಸಿದ ) ಪೂರ್ಣ ದಾಸ್ತಾನನ್ನು 2 ನೇಯ ಡೋಸ್ ಪಡೆಯಲು ಬಾಕಿ ಇರುವ
ಫಲಾನುಭವಿಗಳ ಲಸಿಕಾಕರಣಕ್ಕೆ ಮಾತ್ರ ಬಳಸಲು ನಿರ್ಧರಿಸಿರುತ್ತದೆ . ಈ ಹಿನ್ನೆಲೆಯಲ್ಲಿ ,
18 ರಿಂದ 44 ವರ್ಷ ವಯೋಮಾನದವರ ಕೋವಿಡ್ ಲಸಿಕಾಕರಣವನ್ನು ( ಈಗಾಗಲೇ ಲಸಿಕೆಗಾಗಿ ಸಮಯ ನಿಗಧಿಪಡಿಸಿಕೊಂಡವರೂ ಸೇರಿದಂತೆ )
ದಿನಾಂಕ 14.05.2021 ರಿಂದ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ .
ಈ ಆದೇಶವು ಕೊವಿಡ್ ಲಸಿಕಾಕರಣ ನಡೆಸುತ್ತಿರುವ ಎಲ್ಲಾ ಸರ್ಕಾರಿ ಕೋವಿಡ್ ಲಸಿಕಾ ಕೇಂದ್ರಗಳಿಗೆ ಅನ್ವಯಿಸುತ್ತದೆ .
medicine for coronavirus
KEA CET 2021 ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಪರೀಕ್ಷೆಯನ್ನು ಮುಂದೂಡಲಾಗಿದೆ