bheemana amavasya 2021 date in karnataka , ಭೀಮನ ಅಮಾವಾಸ್ಯೆ ವ್ರತ ಆಚರಣೆ ಸಂಪೂರ್ಣ ವಿಧಾನ
ಸಾಮಾನ್ಯವಾಗಿ ಭೀಮನ ಅಮವಾಸೆ ಕುರಿತು ಸಾಕಷ್ಟು ಜನರಿಗೆ ಗೊತ್ತೇ ಇಲ್ಲ ಇದರ ಆಚರಣೆ ಹೇಗೆ ಮಾಡಬೇಕು
ಯಾರು ಮಾಡಬೇಕು ಹೀಗೆ ಇದರಲ್ಲಿ ಇದೆ ಆದರೆ ಇದರ ಕುರಿತು ಸಾಕಷ್ಟು ಜನರಿಗೆ ಗೊತ್ತಿಲ್ಲದ ಕಾರಣ ಈ ಲೇಖನದಲ್ಲಿ ತಿಳಿಸುವ ಪ್ರಯತ್ನ ನಮ್ಮದು
ಈ ಲೇಖನವನ್ನು ಕೊನೆತನಕ ಓದಿ ಹಾಗೆ ನಿಮ್ಮ ಫ್ರೆಂಡ್ಸ್ ಗೆ ಶೇರ್ ಮಾಡಿ .
ಭೀಮನ ಅಮಾವಾಸ್ಯೆ ವ್ರತ ಆಚರಣೆ ಆಷಾಢ ಬಹುಳ ಅಮಾವಾಸ್ಯೆಯಂದು ಶ್ರೀ ಜ್ಯೋತಿರ್ಭೀಮೇಶ್ವರ ವ್ರತವನ್ನು ಸತಿ ಸಂಜೀವಿನಿ ವ್ರತ,
ಭೀಮನ ಅಮಾವಾಸ್ಯೆ ವ್ರತ, ಗಂಡನ ಪೂಜೆ, ಜ್ಯೋತಿಸ್ತಂಭ ವ್ರತ ಎಂದು ಕರೆಯುವುದುಂಟು. ಆದರೆ, ಭೀಮನ ಅಮಾವಾಸ್ಯೆ ಎಂದು ಎಲ್ಲೆಡೆ ಜನಪ್ರಿಯವಾಗಿದೆ.
ಹಾಗಾಗಿ ಒಂದಿಷ್ಟು ಮಾಹಿತಿಯನ್ನು ನಾವು ಈ ಕೆಳಗೆ ಕೊಟ್ಟಿದ್ದೇವೆ.
ವ್ರತಾಚರಣೆ ಪ್ರಾಂತ್ಯದಿಂದ ಪ್ರಾಂತ್ಯಕ್ಕೆ ಭಿನ್ನತೆಯಿಂದ ಕೂಡಿದೆ ಅಂತಾನೆ ಹೇಳಬಹುದು . ಉದ್ದೇಶ ಒಂದೇ ಆದರೂ ಕೂಡ ,
ಆಚರಣೆಯಲ್ಲಿ ವಿವಿಧತೆಯನ್ನು ಕಾಣಬಹುದುದಾಗಿದೆ . ದಕ್ಷಿಣ ಕನ್ನಡದಲ್ಲಿ ಇದನ್ನು ಆಟಿ ಅಮಾವಾಸ್ಯ ಎಂದು ಕರೆದರೆ ಉತ್ತರ ಕನ್ನಡದ ಕಡೆ ಇದನ್ನೇ ಕೊಡೆ ಅಮಾವಾಸ್ಯೆ ಎಂದು ಕರೆಯುತ್ತಾರೆ , ಅಳಿಯನ ಅಮಾವಾಸ್ಯೆ ಎನ್ನುತ್ತಾರೆ. ಕಾರವಾರದಲ್ಲಿ ಮಾತ್ರ ಅದಕ್ಕೆ ಗಟಾರದ ಅಮಾವಾಸ್ಯೆ ಎಂದು ಕರೆಯುತ್ತಾರೆ. ಅದು ಮಾಂಸ, ಮದಿರೋಪಾಸಕರ ಮಹೋತ್ಸವ. ಹೀಗೆ ಸ್ಥಳದಿಂದ ಸ್ಥಳಕ್ಕೆ ಭಿನ್ನ ಭಿನ್ನ ಹೆಸರನ್ನು ಪಡೆದುಕೊಂಡಿದೆ ಈ ಭೀಮನ ಅಮವಾಸೆ.
ಹೆಂಗಳೆಯರು ಕೈ ಕಂಕಣ ಕಟ್ಟಿಕೊಂಡು ಜ್ಯೋರ್ತಿರ್ಭೀಮೇಶ್ವರನ್ನು ಧ್ಯಾನಿಸಿ, ವ್ರತ ಕೈಗೊಳ್ಳುತ್ತಾರೆ. ರಾಹುಕಾಲ ಹೊರತುಪಡೆಸಿ ಬೆಳಗ್ಗೆ ಅಥವಾ ಸಂಜೆ ಯಾವುದೇ ಶುಭ ಮಹೂರ್ತದಲ್ಲಿ ವ್ರತ ಕೈಗೊಳ್ಳಬಹುದು.
ಭೀಮನ ಅಮಾವಾಸ್ಯೆ ಯಾರು ಆಚರಿಸಬೇಕು? :
ಅವಿವಾಹಿತ ಹೆಣ್ಣು ಮಕ್ಕಳು, ವಿವಾಹಿತ ನವ ವಧು ಆಚರಿಸಬಹುದು. ಒಮ್ಮೆ ವ್ರತ ಕೈಗೊಂಡರೆ ಐದು, ಒಂಭತ್ತು ಅಥವಾ ಹದಿನಾರು ವರ್ಷ ಸಂಪೂರ್ಣಗೊಳಿಸಿ ಉದ್ಯಾಪನೆ ಮಾಡಿ ಎಲ್ಲರಿಗೂ ಸಿಹಿಯೂಟ ಹಾಕಿಸಬೇಕು ಎಂದು ಹಿಂದೂ ಪುರಾಣಗಳು ಹೇಳುತ್ತವೆ. ಆಷಾಢದಲ್ಲಿ ಗಂಡನ ಸಂಗ ತೊರೆದು ತವರಿನ ಗೂಡು ಸೇರಿಕೊಂಡ ಹೆಂಗಳೆಯರು ಗಂಡನ ಪಾದಕ್ಕೆರಗಿ ಮತ್ತೆ ಜೀವನದ ಬಂಡಿ ಹೂಡುವುದು ವಾಡಿಕೆ.
bheemana amavasya 2021 date in karnataka
ಪೂಜಾ ವಿಧಾನ: ಒಂದು ತಟ್ಟೆಯಲ್ಲಿ ಧಾನ್ಯ ರಾಶಿ (ಅಕ್ಕಿ) ಹಾಕಿ , ಅದರ ಮೇಲೆ 2 ದೀಪದ ಕಂಭ ಇಡಬೇಕು. ತುಪ್ಪ ಹಾಕಿ ದೀಪ ಹಚ್ಚಬೇಕು . ಈ ದೀಪಸ್ತಂಭದಲ್ಲಿ ಈಶ್ವರ ಪಾರ್ವತಿಯನ್ನು ಆವಾಹನೆ ಮಾಡಿ ಪೂಜೆ ಮಾಡಬೇಕು .
business ideas karnataka | ಫ್ಯಾನ್ಸಿ ಸ್ಟೋರ್ ಬ್ಯುಸಿನೆಸ್ ಬಿಸಿನೆಸ್ ಐಡಿಯಾ