Civil PC 4000 ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯ ದಿನಾಂಕ (PC Written Exam Date) ಇದೀಗ ಇಲಾಖೆಯ ಅಧಿಕೃತ ಅಂತರ್ಜಾಲದಲ್ಲಿ ಪ್ರಕಟಗೊಂಡಿದೆ.!!
ಪರೀಕ್ಷಾ ದಿನಾಂಕ: 24-10-2021
ಲಿಖಿತ ಪರೀಕ್ಷೆ :
ಪರೀಕ್ಷೆಗಳ ದಿನಾಂಕವನ್ನು ಮುಂದೆ ಜಾಹೀರಾತು ಪಡಿಸಲಾಗುವುದು ಹಾಗೂ ಪೊಲೀಸ್ ಇಲಾಖೆಯ
ವೆಬ್ಸೈಟ್ https://recruitment.ksp.gov.in ನಲ್ಲಿ ಪ್ರಕಟಿಸಲಾಗುವುದು , ಆದ್ದರಿಂದ ಅಭ್ಯರ್ಥಿಗಳು ಇಲಾಖೆಯ ವೈಬ್ಸೈಟ್ನ್ನು ದಿನ ನಿತ್ಯ ನೋಡಲು ತಿಳಿಸಲಾಗಿದೆ .
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ಸಂಬಂಧಪಟ್ಟ ಘಟಕಗಳ ಕೇಂದ್ರಗಳಲ್ಲಿ ಮಾತ್ರ ನಡೆಸಲಾಗುವುದು .
ಆಯ್ಕೆ ಸಮಿತಿಯು ಯಾವುದೇ ಪರೀಕ್ಷಾ ಕೇಂದ್ರವನ್ನು ರದ್ದುಪಡಿಸುವ ಅಥವಾ ಹೊಸದಾಗಿ ಸೇರಿಸುವ ಹಕ್ಕನ್ನು ಕಾಯ್ದಿರಿಸಿಕೊಂಡಿರುತ್ತದೆ .
ಆನ್ಲೈನ್ ಮುಖಾಂತರ ಮಾತ್ರ ಅರ್ಜಿ ಸಲ್ಲಿಸಿರುವುದರಿಂದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯ ದಿನಾಂಕ , ಸಮಯ ಮತ್ತು ಸ್ಥಳವನ್ನು ಹೊಂದಿರುವ ಪ್ರವೇಶ ಕರೆ ಪತ್ರವನ್ನು ಪ್ರತ್ಯೇಕವಾಗಿ ಅಂಚೆ ಮುಖಾಂತರ ನೀಡಲಾಗುವುದಿಲ್ಲ ,
ಆದ್ದರಿಂದ ಲಿಖಿತ ಪರೀಕ್ಷೆಯ ಕರೆಪತ್ರವನ್ನು ಕಛೇರಿಯ ಅಧಿಕೃತ ವೆಬ್ಸೈಟ್ http://recruitment.ksp.gov.in ನಿಂದ ಕಡ್ಡಾಯವಾಗಿ ಪಡೆದುಕೊಳ್ಳತಕ್ಕದ್ದು ( Download ) .
ಈ ಸಂಬಂಧ ಅಭ್ಯರ್ಥಿಗಳು ಮುಖ್ಯವಾಗಿ ಕಛೇರಿಯ ಅಧಿಕೃತ http://recruitment.ksp.gov.in ನ್ನು ದಿನನಿತ್ಯ ಮೇಲಿಂದ ಮೇಲೆ ಗಮನಿಸುತ್ತಿರುವುದು ಸೂಕ್ತ .
ಕರೆಪತ್ರವನ್ನು ಪಡೆಯದೆ ಪರೀಕ್ಷೆಗೆ ಹಾಜರಾದಲ್ಲಿ ಅಂತಹವರಿಗೆ ಲಿಖಿತ ಪರೀಕ್ಷೆಗೆ ಅವಕಾಶ ನೀಡಲಾಗುವುದಿಲ್ಲ .
ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ಬರುವಾಗ , ಕರೆಪತ್ರದ ಜೊತೆಗೆ ಈ ಕೆಳಕಂಡ ಯಾವುದಾದರೊಂದು ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹಾಜರುಪಡಿಸತಕ್ಕದ್ದು
civil pc exam date 2021
i ) dort ‘ ( Passport )
i ) ಚಾಲನಾ ಪರವಾನಗಿ ಪತ್ರ ( Driving License )
iii ) ಪ್ಯಾನ್ ಕಾರ್ಡ್ ( PAN Card )
iv ) ರಾಜ್ಯ ಸರ್ಕಾರ , ಕೇಂದ್ರ ಸರ್ಕಾರ ಸಾರ್ವಜನಿಕ ಸ್ವಾಮ್ಯದ ಅಥವಾ ಸರ್ಕಾರದ ಅಧೀನಕ್ಕೊಳಪಟ್ಟ ಖಾಸಗೀ ಕಂಪನಿಗಳು ವಿತರಿಸಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿ ( Service ID Card )
v ) ಸಾರ್ವಜನಿಕ ಬ್ಯಾಂಕುಗಳು / ಅಂಚೆ ಕಛೇರಿಗಳು ವಿತರಿಸಿರುವ ಭಾವಚಿತ್ರವಿರುವ ಪಾಸ್ ಪುಸ್ತಕ ( Bank Pass Book with Photograph )
vii ) ಭಾವಚಿತ್ರ ಸಮೇತ ನೋಂದಣಿಯಾಗಿರುವ ಸ್ವತ್ತಿನ ದಾಖಲೆಪತ್ರ ಅಥವಾ ಪಟ್ಟಾ ಮಸ್ತಕ ( Patas and registered deeds with Photograph )
vi ) ಭಾವಚಿತ್ರ ಸಮೇತ ಸಂಬಂಧಪಟ್ಟ ಪ್ರಾಧಿಕಾರಿಯವರು ವಿತರಿಸಿರುವ ಜಾತಿ ಪ್ರಮಾಣ ಪತ್ರ ( Caste Certificate with Photo )
vi ) ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಿತರಿಸಿರುವ ಒಂಚಣಿ ಪುಸ್ತಕ / ಪಿಂಚಣಿ ಮಂಜೂರಾತಿ ಆಗಿರುವ ಆದೇಶ
( Ex – servicemen’s pension book / pension payment order )
ix ) ಎನ್.ಆರ್.ಇ.ಜಿ.ಎಸ್.ಯಿಂದ ನೀಡಿದ ಭಾವಚಿತ್ರವಿರುವ ಉದ್ಯೋಗ ಚೀಟಿ , ( Job Cards With Photograph )
X ) ಎಲೆಕ್ಟೋರಲ್ ಬೋಟೋ ಗುರುತಿನ ಚೀಟಿ ( EPIC ) .
xi ) ಭಾರತೀಯ ಗುರುತು ಪ್ರಾಧಿಕಾರದಿಂದ ನೀಡಲಾಗಿರುವ ಆಧಾರ್ ಕಾರ್ಡ್ ( AADHAR CARD )
civil pc exam date 2021