Wednesday, June 29, 2022
HomeKannada Newsರಾಜ್ಯದಲ್ಲಿ 18 ರಿಂದ 44 ವರ್ಷದವರಿಗೆ ಕೋರನ ಲಸಿಕೆ ವಿತರಿಸುವ ಕಾರ್ಯ ಸೋಮವಾರದಿಂದ ಆರಂಭ

ರಾಜ್ಯದಲ್ಲಿ 18 ರಿಂದ 44 ವರ್ಷದವರಿಗೆ ಕೋರನ ಲಸಿಕೆ ವಿತರಿಸುವ ಕಾರ್ಯ ಸೋಮವಾರದಿಂದ ಆರಂಭ

ರಾಜ್ಯದಲ್ಲಿ 18 ರಿಂದ 44 ವರ್ಷದವರಿಗೆ ಕೋರನ ಲಸಿಕೆ ವಿತರಿಸುವ ಕಾರ್ಯ ಸೋಮವಾರದಿಂದ ಆರಂಭ

ರಾಜ್ಯದಲ್ಲಿ 18 ರಿಂದ 44 ವರ್ಷದವರಿಗೆ ಕೋರನ ಲಸಿಕೆ ವಿತರಿಸುವ ಕಾರ್ಯ ಸೋಮವಾರದಿಂದ ಆರಂಭ ಆಗಲಿದೆ ಎಂದು ಅರೋಗ್ಯ ಸಚಿವ

ಡಾ. ಕೆ. ಸುಧಾಕರ್ ತಿಳಿಸಿದ್ದಾರೆ 18 ರಿಂದ 44 ವರ್ಷದವರಿಗೆ ನಾಳೆಯಿಂದ ಬೆಂಗಳೂರಿನ ಕೆಸಿ ಜನರಲ್, ಜಯನಗರ ಜನರಲ್, ಸರ್ ಸಿ ವಿ ರಾಮನ್ ಜನರಲ್, ESI ಈ ನಿಮಾನ್ಸ್ ಆಸ್ಪತ್ರೆ ಹಾಗು ಸರ್ಕಾರೀ ವೈದ್ಯಕೀಯ ಕಾಲೇಜುಗಳಲ್ಲಿ ಕೋರೋಣ ಲಸಿಕೆ ವಿತರಿಸಲಾಗುವುದು .

ಇತರೆ ಜಿಲ್ಲೆಗಳಲ್ಲಿ ಆರಂಭಿಕವಾಗಿ ಜಿಲ್ಲಾ ಆಸ್ಪತ್ರೆ ತಾಲೂಕು ಆಸ್ಪತ್ರೆ ಹಾಗು ಸರ್ಕಾರೀ ಮೆಡಿಕಲ್ ಕಾಲೇಜುಗಳಲ್ಲಿ ಲಸಿಕೆ ನೀಡಲಾಗುವುದು ಲಸಿಕೆ ಪೊರೈಕೆ ಹೆಚ್ಚಾಗುತ್ತಿದ್ದಂತೆ ಮುಂದಿನ ದಿನಗಳಲ್ಲಿ ಇನ್ನಷ್ಟು ಲಸಿಕೆ ಕೇಂದ್ರಗಳಲ್ಲಿ ವಿತರಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ . 18 ರಿಂದ 44 ವರ್ಷದವರಿಗೆ ಲಸಿಕೆ ವಿತರಿಸುವ ಎಲ್ಲ ಕೇಂದ್ರಗಳಲ್ಲಿ ಈ ಗುಂಪಿನವರಿಗೆ ಪ್ರತ್ಯೇಕ ಸ್ಥಳ ಗುರುತಿಸಲಾಗುವುದು.

ಕೋವಿಡ್ ಅಥವಾ ಅರೋಗ್ಯ ಸೇತು ಆಪ್ ನ ಮೂಲಕ ನೋಂದಣಿ ಮಾಡಿಕೊಂಡು ಸಮಯ ನಿಗದಿ ಮಾಡಿಕೊಂಡಿರುವವರಿಗೆ ಮಾತ್ರ ಲಸಿಕೆ ನೀಡಲಾಗುವುದು.

ನ್ಯೂಸ್ಇ ನ್ ಕನ್ನಡ ಕೊರೊನ

ನ್ಯೂಸ್ಇ ನ್ ಕನ್ನಡ ಕೊರೊನ

ನೋಂದಣಿ ಇಲ್ಲದೆ ನೇರವಾಗಿ ಲಸಿಕಾ ಕೇಂದ್ರಕ್ಕೆ ಬರುವವರಿಗೆ ಅವಕಾಶ ವಿಲ್ಲವೆಂದು ಸಚಿವರು ಸ್ಪಷ್ಟಪಡಿಸಿದ್ದಾರೆ . ಪ್ರತಿಯೊಬ್ಬ ವ್ಯಕ್ತಿಗೂ ಆದಷ್ಟುಬೇಗ ಲಸಿಕೆ ವಿತರಿಸಲಾಗುವುದು ಎಂದು ಸಚಿವರು ಹೇಳಿದರು .

ಅಗತ್ಯ ಲಸಿಕೆ ಪೂರೈಕೆ ಮಾಡಿಕೊಳ್ಳಲು ನಿರಂತರ ಪ್ರಯತ್ನ ಸಾಗಿದೆ ಆದ್ದರಿಂದ ಎಲ್ಲ ನಾಗರಿಕರು ಅದರಲ್ಲೂ ವಿಶೇಷವಾಗಿ ಯುವ ಮಿತ್ರರು ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯಬೇಕು ಖಂಡಿತವಾಗಿ ಲಸಿಕೆ ಸಿಗುತ್ತದೆ ಎಂದು ಸಚಿವರು ಮನವಿ ಮಾಡಿದ್ದಾರೆ .

ರಾಜ್ಯದಲ್ಲಿ 3.26 ಕೋಟಿ ವಯೋಮಾನದವರಿದ್ದಾರೆ ಎಲ್ಲರಿಗೂ 6.52 ಕೋಟಿ ಡೋಸ್ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ, ಇದಕಾಗಿ ರಾಜ್ಯ ಸರ್ಕಾರದಿಂದ 2 ಕೋಟಿ ಕೋವಿಶಿಲ್ಡ್ ಹಾಗು 1 ಕೋಟಿ ಕೊವ್ಯಾಕ್ಸಿನ್ ಡೋಸ್ ಗೆ ಬೇಡಿಕೆ ಇಡಲಾಗಿದೆ ಎಂದು ಸಚಿವರು ಹೇಳಿದರು .

ನ್ಯೂಸ್ಇ ನ್ ಕನ್ನಡ ಕೊರೊನ. 

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments