Wednesday, September 21, 2022
HomeKannada Newsಮೇ 3 ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನ | WORLD PRESS FREEDOM DAY

ಮೇ 3 ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನ | WORLD PRESS FREEDOM DAY

ಮೇ 3 ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನ WORLD PRESS FREEDOM DAY

 

ಮೇ 3 ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನ ಪ್ರಪಂಚದಾದ್ಯಂತ ಪತ್ರಿಕಾ ಸ್ವಾತಂತ್ರ್ಯವನ್ನು ಮೌಲ್ಯಮಾಪನ ಮಾಡಲು ಮತ್ತು ಪತ್ರಿಕೋದ್ಯಮ ವೃತ್ತಿಯಲ್ಲಿ ಪ್ರಾಣ ಕಳೆದುಕೊಂಡ ಪತ್ರಕರ್ತರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಮೇ 3 ರಂದು ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ .

ಮೇ3 ಪತ್ರಿಕಾ ಸ್ವಾತಂತ್ರ್ಯ ದಿನ

2021 ರ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ 180 ರಾಷ್ಟ್ರಗಳಲ್ಲಿ ಭಾರತವು  142 ಸ್ಥಾನದಲ್ಲಿದೆ 

ಪತ್ರಿಕಾ ಕ್ಷೇತ್ರಕ್ಕೆ ಅದ್ಭುತ ಕೊಡುಗೆಯನ್ನು ನೀಡಿದವರಿಗೆ ಯುನೇಸ್ಕೊ ಪ್ರಶಸ್ತಿಗಳನ್ನು ಪ್ರಕಟಿಸುತ್ತದೆ. 1986, ಡಿಸೆಂಬರ್‌ 17 ರಂದು ಡ್ರಗ್‌ ಮಾಫಿಯಾ ಬಗ್ಗೆ ಪರಿಣಾಮಕಾರಿಯಾದ ಲೇಖನ ಬರೆದು ಹತ್ಯೆಗೀಡಾದ ಕೊಲಂಬಿಯಾ ಪತ್ರಕರ್ತ ಗುಲ್ಲೆರ್ಮೊ ಕ್ಯಾನೊ ಇಸಾಜ ಅವರ ಗೌರವಾರ್ಥವಾಗಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ. 

ಪತ್ರಿಕೆಯನ್ನು ಪ್ರಜಾಪ್ರಭುತ್ವ ವ್ಯವಸ್ಥೆಯ ನಾಲ್ಕನೇ ಅಂಗ ಅಥವಾ ಆಯಾಮ ಎಂದೇ ಪರಿಗಣಿಸಲಾಗುತ್ತದೆ. ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದಷ್ಟೇ ಅಥವಾ ಅದಕ್ಕಿಂತಲೂ ಪ್ರಬಲವಾದ ಶಕ್ತಿ ಪತ್ರಿಕೋದ್ಯಮಕ್ಕೆ ಇದೆ. ಈ ಮೇಲಿನ ಮೂರು ಅಂಗಗಳ ಉತ್ತಮ ಸಾಧನೆಗಳನ್ನು, ಕಾರ್ಯವೈಖರಿಗಳನ್ನು ಜೊತೆಗೆ ಹುಳುಕುಗಳನ್ನು ಜನರಿಗೆ ತಿಳಿಸುವ ಕೆಲಸವನ್ನು ಪತ್ರಿಕೆಗಳು ವಸ್ತುನಿಷ್ಠವಾಗಿ ಮಾಡುತ್ತಿವೆ.

ಮೇ3 ಪತ್ರಿಕಾ ಸ್ವಾತಂತ್ರ್ಯ ದಿನ

ಈ ಮೂಲಕ ಜನರಿಗೆ ಸಾಕಷ್ಟು ಅರಿವು ಮೂಡಿಸುವ ಕಾರ್ಯದಲ್ಲಿ ತೊಡಗಿವೆ. ಆದರೆ ಪತ್ರಿಕೋದ್ಯಮ ಆರಂಭವಾಗಿಂದಿನಿಂದಲೂ ಪತ್ರಿಕೆಗಳನ್ನು, ಪತ್ರಕರ್ತರನ್ನು, ಪತ್ರಿಕಾ ಸ್ವಾತಂತ್ರ್ಯವನ್ನು ಧಮನಿಸುವ ಪ್ರಯತ್ನಗಳು ನಡೆಯುತ್ತಲೇ ಇವೆ. ವಸ್ತುನಿಷ್ಠವಾದ ವರದಿಗಳಿಗೆ ಅಡ್ಡಗಾಲು ಹಾಕುವುದು, ಪತ್ರಕರ್ತರನ್ನು ಧಮನಿಸುವುದು, ಅವರ ಹತ್ಯೆಗೆ ಯತ್ನಿಸುವುದು ಮುಂತಾದ ಘಟನೆಗಳು ದಿನನಿತ್ಯ ಕೇಳಿ ಬರುತ್ತಿವೆ. ಇದನ್ನೆಲ್ಲಾ ನಿವಾರಿಸಿ ಪತ್ರಿಕಾ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಪ್ರತಿವರ್ಷ ಮೇ 3 ರಂದು ವರ್ಲ್ಡ್‌ ಫ್ರೀಡಂ ಡೇ ಅಥವಾ ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನ ಎಂದು ಆಚರಿಸಲಾಗುತ್ತದೆ.

ಮೇ3 ಪತ್ರಿಕಾ ಸ್ವಾತಂತ್ರ್ಯ ದಿನ

ಮೇ3 ಪತ್ರಿಕಾ ಸ್ವಾತಂತ್ರ್ಯ ದಿನ

ಪತ್ರಿಕಾ ಸ್ವಾತಂತ್ರ್ಯದ ಮೂಲಭೂತ ಸಿದ್ಧಾಂತಗಳ ರಕ್ಷಣೆ, ಪತ್ರಿಕಾ ಸ್ವಾತಂತ್ರ್ಯದ ರಕ್ಷಣೆ, ವೃತ್ತಿ ಧರ್ಮ ಪರಿಪಾಲನೆಯ ಸಮಯದಲ್ಲಿ ಪ್ರಾಣತೆತ್ತವರಿಗೆ ಸಂತಾಪ ಸೂಚಿಸುವುದು. ಈ ಎಲ್ಲಾ ಉದ್ದೇಶಗಳಿಂದ ಈ ದಿನವನ್ನು ಆಚರಿಸಲಾಗುತ್ತದೆ.

ಉದ್ದೇಶ : ವಿಶ್ವಾದಾದ್ಯಂತ ಪತ್ರಿಕಾ ಸ್ವಾತಂತ್ರ್ಯ ವನ್ನು ಮೌಲ್ಯಮಾಪನ ಮಾಡುವುದು , ತಮ್ಮ ಸ್ವಾತಂತ್ರ್ಯ ಕ್ಕಾಗಿ ಮಾಧ್ಯಮದ ಮೇಲೆ ನಡೆಯುತ್ತಿರುವ ದಾಳಿಯಿಂದ ರಕ್ಷಿಸಿಕೊಳ್ಳುವ ಮಾರ್ಗೋಪಾಯಗಳ ಬಗೆಅರಿವು ಮೂಡಿಸುವುದು , ವೃತ್ತಿ ನಿರತರಾಗಿದ್ದಾಗ ಮೃತಪಟ್ಟ ಪತ್ರಕರ್ತರಿಗೆ ಶ್ರದ್ದಾಂಜಲಿ ಸಲ್ಲಿಸುವುದು ಜತೆಗೆ ವಿಶ್ವದ ಹಲವೆಡೆಗಳಲ್ಲಿ ಇಂದಿಗೂ ಪತ್ರಿಕೆಗಳಿಗೆ ಹೇಳುವ , ಪತ್ರಕರ್ತರು , ಸಂಪಾದಕರು ಹಾಗೂ ಪ್ರಕಾಶಕರಿಗೆ ಕಿರುಕುಳ ನೀಡುವ , ಬಂಧಿಸುವ ಹಾಗೂ ಕೊಲೆ ಮಾಡಿದ ನಿದರ್ಶನಗಳಿವೆ . ಎಲ್ಲಕ್ಕಿಂತ ಹೆಚ್ಚಾಗಿ ಪತ್ರಿಕಾ ಸ್ವಾತಂತ್ರ್ಯ ಕಾಪಾಡುವ ಸಲುವಾಗಿ ಸರಕಾರಗಳಿಗೆ ಮನವರಿಕೆ ಮಾಡಿಕೊಡುವುದು ಈ ದಿನದ ಉದ್ದೇಶವಾಗಿದೆ .

ಮೇ3 ಪತ್ರಿಕಾ ಸ್ವಾತಂತ್ರ್ಯ ದಿನ

ದಿನದ ಹಿನ್ನಲೆ : ಪತ್ರಿಕಾ ಸ್ವಾತಂತ್ರ್ಯದ ಮೇಲಿನ ಸವಾರಿ ನಿನ್ನೆ ಮೊನ್ನೆಯದಲ್ಲ . ಜತೆಗೆ ಪತ್ರಕರ್ತರ ಹತ್ಯೆ ಅವ್ಯಾಹತವಾಗಿ ನಡೆಯುತ್ತಲೇ ಇದೆ . ಇದಕ್ಕೆ ದಶಗಳ ಇತಿಹಾಸವೇ ಇದೆ . ಇದರ ಪರಿಣಾಮವಾಗಿ 1991 ರಲ್ಲಿ ನಡೆದ ಯುನೆಸ್ಕೋದ 26 ನೇ ಸಮ್ಮೇಳನದಲ್ಲಿ ಪತ್ರಿಕಾ ಸ್ವಾತಂತ್ರದ ಕುರಿತು ಆಫ್ರಿಕನ್ ಜರ್ನಲಿಸ್ಟ್ ಗಳ ಒತ್ತಾಸೆಯಂತೆ ಮೇ 3 ರಂದು ವಿಶ್ವ ಪತ್ರಿಕಾ ದಿನಾಚರಣೆ ನಡೆಸುವ ತೀರ್ಮಾನಕ್ಕೆ ಬರಲಾಯಿತು . 1993 ರಲ್ಲಿ ಇದು ಅಂಗೀಕಾರವಾಯಿತು .

ಮೇ3 ಪತ್ರಿಕಾ ಸ್ವಾತಂತ್ರ್ಯ ದಿನ

ರಸಂ ಪೌಡರ್ ಮೇಕಿಂಗ್ ಬ್ಯುಸಿನೆಸ್ ಐಡಿಯಾ | Rasam Powder Making Business

RELATED ARTICLES

4 COMMENTS

LEAVE A REPLY

Please enter your comment!
Please enter your name here

Most Popular

Recent Comments